ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ: ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

tnit editors
1 Min Read

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ: ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಸೋನು ನಿಗಮ್ ಅವರು ಇತ್ತೀಚೆಗೆ ಬೆಂಗಳೂರಿನ ಶೋ ಒಂದರಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ‘ಕನ್ನಡ.. ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್ನಲ್ಲಿ ದಾಳಿ ಆಯಿತು’ ಎಂಬರ್ಥ ಬರುವಂತೆ ಅವರು ಮಾತನಾಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಸೋನು ನಿಗಮ್ ಅವರನ್ನು ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂತು.
ಇದೀಗ ಸೋನು ನಿಗಮ್ ಮೇಲೆ ಎಫ್ಐಆರ್ ದಾಖಲಾಗಿದೆ.ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿ ಕೇಳಿದ್ದಕ್ಕೆ,
ಇದಕ್ಕೆ ಪಹಲ್ಗಾಮ್ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು ನಿಗಮ್ ಹೇಳಿದ್ದ ವೀಡಿಯೋ ವೈರಲ್ ಆದ ಬಳಿಕ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಯಾವುದೇ ನಿರ್ಮಾಪಕರು ಸೋನು ನಿಗಮ್ ಇಂದ ಹಾಡು ಹೇಳಸಬಾರದು. ಹೇಳಿಸಿದರೆ ಅದಕ್ಕೆ ನೀವೆ ಹೊಣೆ ಎಂದು ಎಚ್ಚರಿಕೆ ನೀಡುವ ಕೆಲಸ ಕೂಡ ಮಾಡಿದ್ದರು.

Share This Article