ಕನ್ನಡದ ಮೇರುನಟಿ ಬಿ.ಸರೋಜಾದೇವಿ ನಿಧನ: ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
ಬೆಂಗಳೂರು: ಪ್ರಸಿದ್ಧ ಕನ್ನಡ ನಟಿ ಬಿ. ಸರೋಜಾ ದೇವಿ ಅವರು ಇಂದು ತಮ್ಮ 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.. ಇನ್ನೂ ಇವರ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿ ಸರೋಜಾ ದೇವಿ ಒಬ್ಬ ಹಿರಿಯ ತಾರೆ. ನನಗೆ ಬಹಳ ಆತ್ಮೀಯರಾಗಿದ್ದರು. ಅನೇಕ ಸಂದರ್ಭದಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ ಅವರ ಆರೋಗ್ಯ ಸಲ್ಪ ಹೆಚ್ಚುಕಮ್ಮಿ ಆಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.
ಮಾತ್ರವಲ್ಲದೇ ಭಾರತದ ಅನೇಕ ಚಿತ್ರನಟರ ಜೊತೆ ನಟಿಸಿದ್ದರು. ಅವರ ಅಭಿಮಾನಿಗಳಿಗೆ, ಬಂಧುಗಳಿಗೆ ಭಗವಂತ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.