ಕನ್ನಡಿಗರ ಭಾವನೆಗೆ ಧಕ್ಕೆ: ಸೋನು ನಿಗಮ್ ಗೆ ನೋಟಿಸ್ ಜಾರಿ- ಅರೆಸ್ಟ್ ಆಗ್ತಾರಾ ಖ್ಯಾತ ಗಾಯಕ?
ಬೆಂಗಳೂರು:- ಕನ್ನಡಿಗರ ಭಾವನೆಗೆ ಧಕ್ಕೆ ತಂದ ಆರೋಪದಡಿ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ದೂರಿನ ಅನ್ವಯ ಬೆಂಗಳೂರು ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ.
ಕನ್ನಡ ಹಾಡುಗಳ ಬಗ್ಗೆ, ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡುತ್ತಲೇ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದು ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅಲ್ಲದೇ ಸೋನು ನಿಗಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವಲಹಳ್ಳಿ ಪೊಲೀಸರು ಸೋನು ನಿಗಮ್ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಕಾರ್ಯಕ್ರಮ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.