ಕನ್ನಡಿಗ ಪಡಿಕ್ಕಲ್ ಬಗ್ಗೆ ಗವಸ್ಕಾರ್ ಭವಿಷ್ಯ!

Date:

ಇಂಡಿಯನ್ ಪ್ರೀಮಿಯರ್‌ ಲೀಗ್‌ ವೃತ್ತಿ ಬದುಕಿನಲ್ಲಿ ಚೊಚ್ಚಲ ಶತಕ ಬಾರಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್‌ ಪಡಿಕ್ಕಲ್‌ ಅವರ ಸಾಮರ್ಥ್ಯವನ್ನು ಭಾರತ ತಂಡದ ಮಾಜಿ ನಾಯಕ ಸುನಿಲ್‌ ಗವಾಸ್ಕರ್‌ ಗುಣಗಾನ ಮಾಡಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದ 20 ವರ್ಷದ ಎಡಗೈ ಬ್ಯಾಟ್ಸ್‌ಮನ್‌ ಕೇವಲ 52 ಎಸೆತಗಳಲ್ಲಿ ಅಜೇಯ 101 ರನ್‌ ಚೆಚ್ಚುವ ಮೂಲಕ ಆರ್‌ಸಿಬಿ ತಂಡಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ ತಂದುಕೊಟ್ಟರು.

ದೇಶಿ ಕ್ರಿಕೆಟ್‌ನಲ್ಲಿ ಕರ್ನಾಟಕದ ತಂಡದ ಪರ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಟೂರ್ನಿ ಮತ್ತು ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಅಬ್ಬರಿಸಿ ರನ್‌ ಹೊಳೆಯನ್ನೇ ಹರಿಸಿರುವ ದೇವದತ್‌ ಪಡಿಕ್ಕಲ್‌, ಐಪಿಎಲ್‌ 2020 ಟೂರ್ನಿಯಲ್ಲಿ ಆರ್‌ಸಿಬಿ ಪರ ಆಡುವ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು.

ಯುಎಇ ಆತಿಥ್ಯದಲ್ಲಿ ನಡೆದ ಐಪಿಎಲ್ 2020 ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡ ಪಡಿಕ್ಕಲ್ 15 ಪಂದ್ಯಗಳಲ್ಲಿ 470ಕ್ಕೂ ಹೆಚ್ಚು ರನ್‌ಗಳಿಸಿ ಎಲ್ಲರ ಗಮನ ತಮ್ಮತ್ತ ತಿರುಗುವಂತೆ ಮಾಡಿದ್ದಾರೆ. ಈಗ ಚೊಚ್ಚಲ ಐಪಿಎಲ್‌ ಶತಕದ ಮೂಲಕ ಟೀಮ್ ಇಂಡಿಯಾದ ಕದ ತಟ್ಟಲು ಆರಂಭಿಸಿದ್ದಾರೆ.

ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ಶೀಘ್ರವೇ ದೇವದತ್ ಪಡಿಕ್ಕಲ್‌ ಟೀಮ್‌ ಇಂಡಿಯಾ ಪರ ಆಡಿದರೆ ಅಚ್ಚರಿಯೇ ಇಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಬ್ಬರಿಸುವ ಎಲ್ಲ ಸಾಮರ್ಥ್ಯ ಮತ್ತು ಗುಣಮಟ್ಟದ ಆಟ ಅವರಲ್ಲಿದೆ. ರಣಜಿ ಟ್ರೋಫಿ ಟೂರ್ನಿಯಲ್ಲೂ ಈತ ದೊಡ್ಡ ಶತಕಗಳನ್ನು ಬಾರಿಸುವ ಬ್ಯಾಟ್ಸ್‌ಮನ್‌. 50 ಓವರ್‌ಗಳ ಕ್ರಿಕೆಟ್‌ನಲ್ಲೂ ಹಲವು ಶತಕಗಳನ್ನು ಬಾರಿಸಿ ರನ್‌ ಹೊಳೆ ಹರಿಸಿದ್ದಾರೆ. ಈಗ ಟಿ20 ಕ್ರಿಕೆಟ್‌ನಲ್ಲೂ ಯಶಸ್ಸು ಕಂಡಿದ್ದಾರೆ. ಹೀಗಾಗಿ ಶೀಘ್ರವೇ ಭಾರತ ತಂಡದ ಪರ ಆಡಿದರೆ ಅಚ್ಚರಿಯೇ ಇಲ್ಲ,” ಎಂದು ಸ್ಟಾರ್‌ ಸ್ಪೋರ್ಟ್ಸ್‌ ಕಾರ್ಯಕ್ರಮದಲ್ಲಿ ಗವಾಸ್ಕರ್‌ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಐಪಿಎಲ್ 2020 ಟೂರ್ನಿಗೂ ಮುನ್ನ ನಡೆದಿದ್ದ ವಿಜಯ್ ಹಝಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿತ್ತು. ದೇವದತ್‌ ಪಡಿಕ್ಕಲ್ ಸತತ 5 ಶಯಕಗಳೊಂದಿಗೆ ತಂಡದ ಪರ 700ಕ್ಕೂ ಹೆಚ್ಚು ರನ್‌ ಗಳಿಸಿದ್ದರು. ಇನ್ನು ಕಳೆದ ವರ್ಷ ಐಪಿಎಲ್ ಟೂರ್ನಿಯಲ್ಲಿ ದೇವ್ 15 ಪಂದ್ಯಗಳಿಂದ 473 ರನ್‌ಗಳನ್ನು ಸಿಡಿಸಿದ್ದರು. ಇದರಲ್ಲಿ ಐದ ಅರ್ಧಶತಕಗಳು ಸೇರಿದ್ದವು.

 

ಐಪಿಎಲ್ 2020 ಟೂರ್ನಿಗೂ ಮುನ್ನ ನಡೆದಿದ್ದ ವಿಜಯ್ ಹಝಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿತ್ತು. ದೇವದತ್‌ ಪಡಿಕ್ಕಲ್ ಸತತ 5 ಶಯಕಗಳೊಂದಿಗೆ ತಂಡದ ಪರ 700ಕ್ಕೂ ಹೆಚ್ಚು ರನ್‌ ಗಳಿಸಿದ್ದರು. ಇನ್ನು ಕಳೆದ ವರ್ಷ ಐಪಿಎಲ್ ಟೂರ್ನಿಯಲ್ಲಿ ದೇವ್ 15 ಪಂದ್ಯಗಳಿಂದ 473 ರನ್‌ಗಳನ್ನು ಸಿಡಿಸಿದ್ದರು. ಇದರಲ್ಲಿ ಐದ ಅರ್ಧಶತಕಗಳು ಸೇರಿದ್ದವು.

ಈ ವರ್ಷ ಐಪಿಎಲ್‌ ಆರಂಭಕ್ಕೂ ಮೊದಲೇ ಕೋವಿಡ್‌-19 ಸೋಂಕಿಗೆ ತುತ್ತಾಗಿದ್ದ ದೇವದತ್‌, ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಬಳಿಕ ಸನ್‌ರೈಸರ್ಸ್‌ ಮತ್ತು ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ ಕಗ್ರಮವಾಗಿ 11 ಮತ್ತು 25 ರನ್‌ಗಳನ್ನು ಮಾತ್ರವೇ ಗಳಿಸಿದ್ದರು. ಇದೀಗ ರಾಯಲ್ಸ್‌ ಎದುರು ಶತಕ ಬಾರಿಸುವ ಮೂಲಕ ತಮ್ಮ ಶ್ರೇಷ್ಟ ಲಯವನ್ನು ಮರಳಿ ಕಂಡುಕೊಂಡಿದ್ದಾರೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...