ಕನ್ನಡ ಆಯ್ತು ಇದೀಗ ತೆಲುಗು ಚಿತ್ರಗಳಲ್ಲಿಯೂ ನಟಿಸುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

Date:

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಕಿರಿಕ್ ಪಾರ್ಟಿ ಸಿನಿಮಾದಿಂದಾಗಿ ರಶ್ಮಿಕಾ ಮಂದಣ್ಣ ಅವರು ಒಳ್ಳೆಯ ಹೆಸರಿನ ಜೊತೆ ದೊಡ್ಡ ದೊಡ್ಡ ಚಿತ್ರಗಳ ಆಫರ್ ಗಳನ್ನು ಸಹ ಪಡೆದುಕೊಂಡರು. ಪುನೀತ್, ದರ್ಶನ್ ರಂತಹ ಸ್ಟಾರ್ ನಟರ ಜೊತೆ ನಟಿಸಿದ ನಂತರ ತೆಲುಗಿಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ತಮಿಳು ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ.

 

 

ತೆಲುಗಿನಲ್ಲಿಯೂ ಸಹ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡಿದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೀಗ ಬಾಲಿವುಡ್ ಆಫರ್ಗಳು ಬರತೊಡಗಿವೆ. ಹೌದು ರಶ್ಮಿಕಾಗೆ ಬಾಲಿವುಡ್ ಆಫರ್ ಬರುತ್ತಿರುವ ಕಾರಣದಿಂದ ಅಲ್ಲಿಯ ಬಿಗ್ ಬಜೆಟ್ ಚಿತ್ರದಲ್ಲಿ ಅಭಿನಯಿಸಲು ತೆಲುಗಿನ ಸ್ಟಾರ್ ನಟನ ಚಿತ್ರವೊಂದನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.

 

ಹೌದು ಜೂನಿಯರ್ ಎನ್ಟಿಆರ್ ಚಿತ್ರದಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಹಿಂದಿ ಚಿತ್ರದಲ್ಲಿ ಅಭಿನಯಿಸುವ ಸಲುವಾಗಿ ಈ ಅವಕಾಶವನ್ನು ರಶ್ಮಿಕಾ ಮಂದಣ್ಣ ಅವರು ತಿರಸ್ಕಾರ ಮಾಡಿದ್ದಾರೆ ಎಂಬ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇನ್ನು ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ತೆಲುಗಿಗೆ ಹೋದಾಗ ಕನ್ನಡದ “ವೃತ್ರ” ಎಂಬ ಸಿನಿಮಾವನ್ನು ಒಪ್ಪಿಕೊಂಡು ತದನಂತರ ತಿರಸ್ಕರಿಸಿದ್ದರು. ಇದೀಗ ತೆಲುಗಿನಲ್ಲಿಯೂ ಸಹ ಅದೇ ರೀತಿ ಮಾಡುತ್ತಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ..

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...