ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಬ್ಯಾನ್- ಖ್ಯಾತ ಗಾಯಕನಿಗೆ ಬಿಗ್ ಶಾಕ್!

Date:

ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಬ್ಯಾನ್- ಖ್ಯಾತ ಗಾಯಕನಿಗೆ ಬಿಗ್ ಶಾಕ್!

ಕನ್ನಡಿಗರ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಭಾರತೀಯ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ದಿಂದ ಬ್ಯಾನ್ ಮಾಡಲಾಗಿದೆ.

ಸೋನು ನಿಗಮ್ಗೆ ಕನ್ನಡದ ಮೇಲೆ ವಿಶೇಷ ಪ್ರೀತಿ-ಗೌರವ ಇದ್ದಿದ್ದು ನಿಜ. ಆದರೆ, ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಕನ್ನಡ ಕನ್ನಡ.. ಹೀಗೆ ಹೇಳಿದ್ದರಿಂದಲೇ ಪಹಲ್ಗಾಮ್ ದಾಳಿ ಆಯಿತು’ ಎನ್ನುವ ಮೂಲಕ ಸೋನು ನಿಗಮ್ ಸುಖಾ ಸುಮ್ಮನೆ ತಮ್ಮ ಮೇಲೆ ವಿವಾದವನ್ನು ಎಳೆದುಕೊಂಡರು. ಆ ಬಳಿಕ ಅವರು ಹೇಳಿಕೆಗೆ ಸ್ಪಷ್ಟನೆ ಕೊಟ್ಟರೇ ಹೊರತು ಕ್ಷಮೆ ಕೇಳಿಲ್ಲ. ಈಗ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕರ್ನಾಟಕ ಫಿಲ್ಮ್ ಚೇಂಬರ್ ಅವರಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ.

ಈ ಬಗ್ಗೆ ಮಾತನಾಡಿರೋ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ‘ಘಟನೆ ಬಳಿಕ ಈವರೆಗೂ ಸೋನು ನಿಗಮ್ ಕನ್ನಡಿಗರ ಬಳಿ ಕ್ಷಮೆ‌ ಕೇಳಿಲ್ಲ. ಇನ್ನು ಮುಂದೆ ಸೋನು ನಿಗಮ್ ಅವರಿಂದ ಚಿತ್ರರಂಗದವರು ಮ್ಯೂಸಿಕಲ್ ನೈಟ್ಸ್ ಮಾಡುವುದಿಲ್ಲ. ಅವರ ಬಳಿ ಹಾಡನ್ನು ಹಾಡಿಸೋದಿಲ್ಲ. ಈ ಕ್ಷಣದಿಂದಲೇ ಸೋನುಗೆ ಅಸಹಕಾರ ತೋರಬೇಕೆಂದು ನಿರ್ಧಾರ ಮಾಡಲಾಗಿದೆ’ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...