ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ನಿಧನ

ಕನ್ನಡ ಚಲನಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ (80) ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಮನೆದಲ್ಲಿ ಕಾಲು ಜಾರಿ ಬಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಉಮೇಶ್ ಅವರಿಗೆ ಪರೀಕ್ಷೆಯ ವೇಳೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ಪತ್ತೆಯಾಗಿತ್ತು.

ವೈದ್ಯರು ಕಿಮೋಥೆರಪಿ ಮತ್ತು ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕಣ್ಣು ಮುಚ್ಚಿದ್ದಾರೆ. ಅವರ ಅನಾರೋಗ್ಯದ ಸಮಯದಲ್ಲಿ ಅನೇಕ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

1960ರ ದಶಕದಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಎಂ.ಎಸ್. ಉಮೇಶ್ ಇತ್ತೀಚಿನ ದಿನಗಳ ತನಕವೂ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಪೋಷಕ ಪಾತ್ರಗಳು ಹಾಗೂ ಹಾಸ್ಯಭರಿತ ಪಾತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಅವರು ಪ್ರೇಕ್ಷಕರ ಮನಸನ್ನು ಗೆದ್ದಿದ್ದರು. ನಟನ ನಿಧನದಿಂದ ಚಿತ್ರರಂಗದಲ್ಲಿ ದುಃಖದ ಛಾಯೆ ಆವರಿಸಿದ್ದು, ಅಭಿಮಾನಿಗಳು ಮತ್ತು ಸಹನಟರು ಶೋಕ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...