ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂಬ ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿಕೆ ಖಂಡಿಸಿ ಕೊಲ್ಹಾಪುರದಲ್ಲಿ ಎಂಇಎಸ್ ನಾಯಕರು ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ನಿನ್ನೆ ಪುಂಡಾಟಿಕೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಬೆಳಗಾವಿ ಗಡಿ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಯಾವುದೇ ಅಹಿತಕರ ಘಟನೆಗಳು ಭುಗಿಲೇಳದಂತೆ ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.