ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ವಿವಾದಕ್ಕೆ ಗುರಿಯಾಗಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿದ ಅವರ ಹೇಳಿಕೆ ಬಗ್ಗೆ ಈಗ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ ಎಂದು ತಿಳಿಸಿದ್ದಾರೆ.
ಮೇ.24ರಂದು ಚೆನ್ನೈನಲ್ಲಿ ಆಯೋಜಿಸಲಾಗಿದ್ದ ಥಗ್ ಲೈಫ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕನ್ನಡದ ನಟ ಶಿವರಾಜ್ ಕುಮಾರ್ ಅವರನ್ನ ಉದ್ದೇಶಿಸಿ ಮಾತನಾಡಿದ್ದ ಕಮಲ್ ಹಾಸನ್ “ಅವರು ಆ ಊರಿನಲ್ಲಿರುವ ನನ್ನ ಕುಟುಂಬ.
ಅದಕ್ಕಾಗಿಯೇ ಅವರು ಇಲ್ಲಿ ಬಂದಿದ್ದಾರೆ. ಅದ್ಕಕಾಗಿಯೇ ನಾನು ನನ್ನ ಮಾತು ಆರಂಭಿಸುವುದಕ್ಕೂ ಮುನ್ನ, ಉಸಿರೇ, ತಮಿಳೇ ಎಂದು ಆರಂಭಿಸಿದ್ದೆ. ತಮಿಳಿನಿಂದ ಹುಟ್ಟಿದ್ದೇ ನಿಮ್ಮ ಭಾಷೆ. ಹಾಗಾಗಿ ನೀವು ಅದರಲ್ಲಿ ಭಾಗವಾಗಿದ್ದೀರಿ” ಎಂದಿದ್ದರು. ಕಮಲ್ ಹಾಸನ್ ಈ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.