ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

tnit editors
1 Min Read

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಕನ್ನಡ ರಾಜ್ಯೋತ್ಸವ ಎಂದರೆ ಇಡೀ ವಿಶ್ವದಲ್ಲಿರುವ ಎಲ್ಲ ಕನ್ನಡಿಗರಿಗೂ ಒಂದು ರೀತಿ ಸಂಭ್ರಮ, ಈ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ. 

ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

Share This Article