No menu items!
24 C
Munich
Monday, May 4, 2026

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ವಿಧಿವಶ

Must read

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.
ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

- Advertisement -spot_img

More articles

- Advertisement -spot_img

Latest article