ಕನ್ನಡಿಗರಿಗೆ ಉದ್ಯೋಗ ಮತ್ತು ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಅವರು ಮೈಸೂರು ಬ್ಯಾಂಕ್ ವೃತ್ತದ ಬಳಿ ಇಂದು ವಿನೂತನ ಚಳವಳಿ ನಡೆಸಿದರು.ಕನ್ನಡ ನಾಡಿನಲ್ಲಿರುವ ಕೈಗಾರಿಕೆಗಳು, ಸಾಫ್ಟ್‍ವೇರ್ ಕಂಪನಿ ಗಳು, ಬ್ಯಾಂಕ್‍ಗಳು ಸೇರಿದಂತೆ ಎಲ್ಲಾಕಡೆ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು.ರೈಲ್ವೆ ಇಲಾಖೆ,
ಬ್ಯಾಂಕ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿ ನಡೆಯಬೇಕು ಎಂದು ಆಗ್ರಹಿಸಿದರು . ಎಲ್ಲಾ ಮಾಲ್‍ಗಳು, ವಾಣಿಜ್ಯ ಕಟ್ಟಡಗಳಿಗೆ ಭೇಟಿ ನೀಡಿ ಮೆರವಣಿಗೆ ನಡೆಸಿ ಕನ್ನಡಿಗರಿಗೆ ಉದ್ಯೋಗ, ಕನ್ನಡದ ನಾಮಫಲಕಗಳನ್ನು ಹಾಕಬೇಕು. ನಾಡು, ನುಡಿ, ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕೆಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.