ಕಪ್ಪು ಕುಳಿಗಳ ಅಧ್ಯಯನಕ್ಕಾಗಿ ಇಸ್ರೋ ಎಕ್ಸ್‌ಪೋಸ್ಯಾಟ್‌ ಉಡಾವಣೆ ಯಶಸ್ವಿ

Date:

ಶ್ರೀಹರಿಕೋಟ: ಹೊಸ ವರ್ಷದ ದಿನವೇ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹೊಸ ಮೈಲುಗಲ್ಲು ಸೃಷ್ಠಿ ಮಾಡಿದೆ. ಹೌದು ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.
ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.
POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ ಖಗೋಳವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...