ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆಹರಟೆ..ನಾಗಭೂಷಣ್ ಸಿನಿಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್

Date:

 

ಡಾಲಿ‌ ಧನಂಜಯ್ ನಿರ್ಮಾಣದ ವಿದ್ಯಾಪತಿ ಸಿನಿಮಾ ನಾನಾ ವಿಧದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಟೀಸರ್, ಮೇಕಿಂಗ್ ನಿಂದಲೇ ಗಮನಸೆಳೆದಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಕರಾಟೆ ತರಗತಿಯಲ್ಲಿ ವಿದ್ಯಾಪತಿಯ ತಲೆಹರಟೆಯ ಹಾಡಿಗೆ ನವರಸ ನಾಯಕ ಜಗ್ಗೇಶ್ ಧ್ವನಿಯಾಗಿದ್ದಾರೆ. ಅಯ್ಯೋ ವಿಧಿಯೇ ಎಂದು ಶುರುವಾಗುವ ಹಾಡಿಗೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಡಾಸ್ಮೋಡ್ ಸಂಗೀತ ಸಖತ್ ಕಿಕ್ ಕೊಡುತ್ತದೆ. ಸಖತ್ ಫನ್ ಆಗಿ‌ ಮೂಡಿಬಂದಿರುವ ಗೀತೆಯಲ್ಲಿ ರಂಗಾಯಣ ರಘು ಕೂಡ ಹೆಜ್ಜೆ ಹಾಕಿರುವುದು ವಿಶೇಷ.


“ಟಗರು ಪಲ್ಯ” ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ‘ಉಪಾಧ್ಯಕ್ಷ’ನ ಬೆಡಗಿ ಮಲೈಕಾ ವಸೂಪಾಲ್ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ನಲ್ಲಿ ನಾಗಭೂಷಣ್ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಮಾಸ್ಟರ್ ಆಗಿ ಹಿರಿಯ ನಟ ರಂಗಾಯಣ ರಘು ಅಭಿನಯಿಸಿದ್ದಾರೆ.

ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ”ವಿದ್ಯಾಪತಿ” ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ, ಸಿನಿಮಾವನ್ನು ಇವರೇ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲವಿತ್ ಅವರ ಛಾಯಾಗ್ರಹಣ ಇದೆ. ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ವಿದ್ಯಾಪತಿ ಸಿನಿಮಾಗಿದೆ. ಟಗರು ಪಲ್ಯ ಸಿನಿಮಾ ನಿರ್ಮಾಣ ಮಾಡಿದ್ದ ಡಾಲಿ ಧನಂಜಯ್ ಇದೀಗ ‘ವಿದ್ಯಾಪತಿ’ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ಆ್ಯಕ್ಷನ್ ಜೊತೆಗೆ ಹಾಸ್ಯವೂ ಇರಲಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ ಸೌಂದರ್ಯಕ್ಕೆ ರೋಸ್‌...

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ ನವದೆಹಲಿ: ಇತ್ತೀಚಿನ ದಿನಗಳಲ್ಲಿ...