ಕರ್ನಾಟಕದಲ್ಲಿ ಇದ್ದುಕೊಂಡೇ ತಾಲಿಬಾನ್ ಪರ ಪೋಸ್ಟ್ ಹಾಕಿದ ಭೂಪ!

Date:

ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್‌ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ.

ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ ಫೇಸ್ ಬುಕ್‌ನಲ್ಲಿ ‘ಐ ಲವ್ ತಾಲಿಬಾನಿ’ ಎಂದು ಸ್ಟೇಟಸ್ ಹಾಕಿದ್ದಾನೆ. ಈಗ ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ಆಸೀಫ್ ಗಲಗಲಿ ಹಾಕಿದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ಜನರು ಆಸೀಫ್ ಬಂಧನಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಸದ್ಯ ಆಸೀಫ್ ಪರಾರಿಯಾಗಿದ್ದು, ಶುಕ್ರವಾರ ಸಂಜೆಯ ತನಕವೂ ಪ್ರಕರಣ ದಾಖಲಾಗಿಲ್ಲ. ಜಮಖಂಡಿಯ ಪೊಲೀಸರು ಆಸೀಫ್ ಗಲಗಲಿ ಪೋಷಕರು, ಸಂಬಂಧಿಗಳನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಆಸೀಫ್‌ಗಾಗಿ ಹುಡುಕಾಟ ಮುಂದುವರೆದಿದೆ. ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...