ಕರ್ನಾಟಕದಲ್ಲಿ ಕ್ರಮೇಣ ಏರುತ್ತಿದೆ ಕೊರೊನಾವೈರಸ್

admin
1 Min Read

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕ್ರಮೇಣ ಏರಿಕೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.76ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1365 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1558 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 22 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37061 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2933192ಕ್ಕೆ ಏರಿಕೆಯಾಗಿದೆ. ಒಟ್ಟು 2874839 ಸೋಂಕಿತರು ಗುಣಮುಖರಾಗಿದ್ದು. 21266 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share This Article
Leave a Comment