ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Date:

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದರೆಡೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವಾಮಾನ ಮುಂದುವರಿಯುವ ನಿರೀಕ್ಷೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ ಮಧ್ಯಾಹ್ನ ಊಟದ ನಂತರ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು ಬೆಂಗಳೂರು:...

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ...

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ ಕೋಲಾರ: ರಾಜ್ಯದಲ್ಲಿ...