ಕರ್ನಾಟಕದಲ್ಲಿ ಮತ್ತೆ ಕೋವಿಡ್ ಹಾವಳಿ: ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿ

Date:

ಕರ್ನಾಟಕದಲ್ಲಿ ಮತ್ತೆ ಕೋವಿಡ್ ಹಾವಳಿ: ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿ

ಬೆಳಗಾವಿ: ಕಳೆದ ಮೂರು ವರ್ಷದ ಹಿಂದೆ ಜಗತ್ತನೆ ಇನ್ನಿಲ್ಲದ್ದಂತೆ ಕಾಡಿದ್ದ ಕೊರೊನಾ ಈಗ ಮತ್ತೆ ಏಷ್ಯಾದ ಕೆಲ ದೇಶಗಳಲ್ಲಿ ಮತ್ತೆ ಕೊವಿಡ್ ಪ್ರಕರಣಗಳಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ. ಇದೀಗ ಕೊರೋನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ.
ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ರೋಗಿಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...