ಕರ್ನಾಟಕದಲ್ಲಿ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಮಾತ್ರ ಮಳೆ

0
298

ಕರ್ನಾಟಕದಲ್ಲಿ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಮಾತ್ರ ಮಳೆ

ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದ್ದು, ಹಲವೆಡೆ ಮಾತ್ರ ಸಾಧಾರಣ ಮಳೆ ಆಗಲಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಎಚ್​​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.