ಕರ್ನಾಟಕದಲ್ಲಿ ಮುಂದಿನ 4 ದಿನಗಳವರೆಗೆ ಭಾರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕ ಕರಾವಳಿ ಭಾಗಗಳನ್ನೂ ಸೇರಿ ಮುಂದಿನ 4 ದಿನಗಳ ಕಾಲ, ಅಂದರೆ ಜೂನ್ 14ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು,
ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.