ಕರ್ನಾಟಕದಲ್ಲಿ ವರುಣನ ಅಬ್ಬರ ಕಡಿಮೆ: ಈ ಜಿಲ್ಲೆಯಲ್ಲಿ ಸಾಧಾರಣ ಮಳೆ

tnit editors
1 Min Read

ಕರ್ನಾಟಕದಲ್ಲಿ ವರುಣನ ಅಬ್ಬರ ಕಡಿಮೆ: ಈ ಜಿಲ್ಲೆಯಲ್ಲಿ ಸಾಧಾರಣ ಮಳೆ

ಬೆಂಗಳೂರು:- ಕರ್ನಾಟಕದಲ್ಲಿ ವರುಣನ ಅಬ್ಬರ ಕಡಿಮೆ ಆಗಿದ್ದು, ಹಲವೆಡೆ ಇಂದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​​ಎಎಲ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Share This Article