ಬೆಂಗಳೂರು: ಕಾಂಗ್ರೆಸ್ ಅಧಿಕಾರದಲ್ಲಿದೆ, ಅಧಿಕಾರದ ಅಮಲಿನಲ್ಲಿದೆ ಅದಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೊದಲನೆಯದಾಗಿ ಕಳೆದ ಹಲವು ದಶಕಗಳಿಂದ ಎಲ್ಲಾ ಹಿಂದೂ ಕಾರ್ಯಕರ್ತರ ಕನಸು.
ಅಯೋಧ್ಯೆಯಲ್ಲಿ ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕು ಅನ್ನೋದು ಹೋರಾಟ. ನಾವ್ಯಾರು ಕಲ್ಪನೆ ಇಟ್ಟಿರಲಿಲ್ಲ ಮುಂದೊಂದು ದಿನ ಮೊದಿ ಅವರ ಕೈಯಿಂದ ಲೋಕಾರ್ಪಣೆ ಆಗಲಿದೆ ಅಂತ ಅಂದರು.
ಎರಡನೆಯದ್ದು ಅನೇಕ ಸಂದರ್ಭದಲ್ಲಿ ಭಾಷಣ ಮಾಡ್ತಿದ್ದೆವು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಏತರ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಂದಿನ ದಿನದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಂಧರ್ಭದಲ್ಲಿ ನಾವು ಜವಾಬ್ದಾರಿ ತೆಗೆದುಕೊಂಡಿದ್ದೇವೆದೇಶದ ಇತಿಹಾಸಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಬರುವ ಸಂದರ್ಭದಲ್ಲಿ ನಮಗೆ ಹೊಣೆಇದೆ. ಕರ್ನಾಟಕದಲ್ಲಿ 28ಕ್ಕೆ 28ಕ್ಷೇತ್ರದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಸೇರಿ ಗೆಲ್ಲಬೇಕಿದೆ ಕಾಂಗ್ರೆಸ್ ಅಧಿಕಾರದಲ್ಲಿದೆ, ಅಧಿಕಾರದ ಅಮಲಿನಲ್ಲಿದೆ ಅದಕ್ಕೆ ತಕ್ಕ ಪಾಠ ಕಲಿಸಬೇಕು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ದಕ್ಷಿಣ ಭಾರತ ಬಿಜೆಪಿಗೆ ಸುಭದ್ರಕೋಟೆ ಅನ್ನೋದನ್ನ ಸಾಭೀತು ಮಾಡಬೇಕಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ 28ಕ್ಕೆ 28ಕ್ಷೇತ್ರದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಸೇರಿ ಗೆಲ್ಲಬೇಕಿದೆ !
Date: