ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಲು ಚಿಂತನೆ ನಡೆಸಿದ್ದಾರೆಂದು ಹೇಳಲಾಗಿದೆ.
ಪ್ರಸ್ತುತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಾಮಲೈ ಅವರು, ಸದ್ಯದಲ್ಲೇ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳಾಗಿದ್ದ ಅಣ್ಣಾಮಲೈ ಅವರು, ಕಾನೂನು-ಸುವ್ಯವಸ್ಥೆ ಕಾಪಾಡಲು ಹಲವು ಖಡಕ್ ನಿರ್ಧಾರಗಳನ್ನು ಕೈಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಳಿಕ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಅಲ್ಲೂ ಕೂಡ ಕಾನೂನುಬಾಹಿರ ಚಟುವಟಿಕೆ ನಡೆಸುವವರಿಗೆ ಅಣ್ಣಾಮಲೈ ಸಿಂಹಸ್ವಪ್ನರಾಗಿದ್ದರು.
ಆದರೆ ಇತ್ತೀಚಿನ ಕೆಲ ಬೆಳವಣಿಗೆಗಳಿಂದ ಅಣ್ಣಾಮಲೈ ಬೇಸರಗೊಂಡಿದ್ದಾರೆಂದು ಹೇಳಲಾಗಿದೆ.ಹೀಗಾಗಿಯೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಅವರು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ತಮಿಳುನಾಡು ರಾಜಕಾರಣದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆಯೆಂದು ಹೇಳಲಾಗಿದೆ.