No menu items!
10.8 C
Munich
Wednesday, April 29, 2026

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

Must read

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ನಗರದಲ್ಲಿ ಮಂಜು ಮುಸುಕಿದ ವಾತಾವರಣ ಮುಂದುವರೆಯಲಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಇದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ವಾತಾವರಣವಿರಲಿದೆ.

ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 16 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 17°C ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article