No menu items!
5.4 C
Munich
Thursday, April 30, 2026

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

Must read

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ, ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆಯು ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆಯು ಮುಂದುವರಿಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ ಹಾಗೂ ಶೋರಾಪುರ ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ. ಮೈಸೂರಿನಲ್ಲಿ ಕನಿಷ್ಠ 18.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲೆಯಾಗಿದೆ.ಗುರುವಾರ ಸಂಜೆ ನಗರದಲ್ಲಿ ಮಳೆಯಾಗಿದ್ದು, ಶುಕ್ರವಾರವೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 27.4°C, ಕನಿಷ್ಠ 20.0°C

ನಗರದ ಕೇಂದ್ರ ಭಾಗದಲ್ಲಿ ಗರಿಷ್ಠ 28.4°C, ಕನಿಷ್ಠ 20.0°C

ಕೆಐಎಎಲ್‌ನಲ್ಲಿ ಗರಿಷ್ಠ 30.6°C, ಕನಿಷ್ಠ 19.2°C

ಜಿಕೆವಿಕೆಯಲ್ಲಿ ಗರಿಷ್ಠ 29.2°C, ಕನಿಷ್ಠ 19.6°C ದಾಖಲಾಗಿದೆ.

ಹೊನ್ನಾವರದಲ್ಲಿ ಗರಿಷ್ಠ 31.1°C, ಕನಿಷ್ಠ 21.8°C; ಕಾರವಾರದಲ್ಲಿ ಗರಿಷ್ಠ 31.2°C, ಕನಿಷ್ಠ 22.0°C; ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 30.1°C, ಕನಿಷ್ಠ 22.0°C; ಶಕ್ತಿನಗರದಲ್ಲಿ ಗರಿಷ್ಠ 30.8°C, ಕನಿಷ್ಠ 23.2°C ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 28.6°C, ಕನಿಷ್ಠ 17.8°C; ಬೀದರ್‌ನಲ್ಲಿ ಗರಿಷ್ಠ 29.2°C, ಕನಿಷ್ಠ 20.0°C; ವಿಜಯಪುರದಲ್ಲಿ ಗರಿಷ್ಠ 29.2°C, ಕನಿಷ್ಠ 21.0°C; ಧಾರವಾಡದಲ್ಲಿ ಗರಿಷ್ಠ 30.0°C, ಕನಿಷ್ಠ 18.6°C ಉಷ್ಣಾಂಶ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article