ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್!
ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಲ್ಲಿ ತೆರವಾಗಿರುವ ಸ್ಥಾನಕ್ಕೆ ನವೆಂಬರ್ 23 ರಂದು ಉಪ ಚುನಾವಣೆ ನಡೆಯಲಿದೆ ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಹೌದು ಚುನಾವಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ ನ.20 ರಂದು ನಡೆಯಲಿದೆ. ಒಟ್ಟು 48 ವಿಧಾನಸಭೆ ಮತ್ತು 2 ಲೋಕಸಭಾ ಉಪಚುನಾವಣೆಯ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.