No menu items!
14.8 C
Munich
Tuesday, June 16, 2026

ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ !

Must read

ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರು- ರಾಜಾ ಅಮರೇಶ್ವರ ನಾಯಕ್, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಿದೆ.
ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿ ಕಾಯ್ದಿರಿಸಿದೆ. ಕ್ಷೇತ್ರದಲ್ಲಿ ಟಿಕೆಟ್ಗಾಗಿ ಹಾಲಿ ಸಂಸದ ಎ.ನಾರಾಯಣ ಸ್ವಾಮಿ ವರ್ಸಸ್ ಜನಾರ್ದನ ಸ್ವಾಮಿ ಮಧ್ಯೆ ತೀವ್ರ ಪೈಪೋಟಿ ಇದೆ. ಜನಾರ್ದನ ಸ್ವಾಮಿ ಪರ ಸಂಘ ಪರಿವಾರ ನಿಂತಿದೆ. ಇದರ ಮಧ್ಯೆ ಗೋವಿಂದ ಕಾರಜೋಳ ಹೆಸರು ಕೂಡ ಕೇಳಿಬರುತ್ತಿದೆ. ಹೀಗಾಗಿ ಪಕ್ಷದ ಯಾರಿಗೆ ಮಣೆ ಹಾಕುತ್ತದೆ ಎಂಬುದು ಕುತೂಹಲ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article