No menu items!
17 C
Munich
Saturday, May 2, 2026

ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಬಿಜೆಪಿ ಅವರಿಗೆ ನೈತಿಕತೆಯಿಲ್ಲ: ಡಿ.ಕೆ.ಶಿವಕುಮಾರ್

Must read

ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಬಿಜೆಪಿ ಅವರಿಗೆ ನೈತಿಕತೆಯಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಬಿಜೆಪಿ ಅವರಿಗೆ ನೈತಿಕತೆಯಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ.
ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ ಎಂದು ಹೇಳಿದರು.
ಇನ್ನೂ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ. ನೆನ್ನೆ ವಿರೋಧ ಪಕ್ಷಗಳ ಶಾಸಕರು ಕೇವಲ ಫೋಟೋಗಾಗಿ ಮಾತ್ರ ಬಂದಿದ್ದರು. ಏನನ್ನೂ ಕೇಳಲು ಬಂದಿರಲಿಲ್ಲ. ಮುಖ್ಯಮಂತ್ರಿಗಳು ಇಲಾಖೆಗೆ ಏನು ಕೊಡಬೇಕು ಎಂದು ಸಚಿವರ ಬಳಿ ಚರ್ಚೆ ಮಾಡುತ್ತಾರೆ” ಎಂದು ತಿರುಗೇಟು ನೀಡಿದರು.

- Advertisement -spot_img

More articles

- Advertisement -spot_img

Latest article