ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ! ಈ ರೀತಿ ಚೆಕ್‌ ಮಾಡಿ

tnit editors
1 Min Read

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ! ಈ ರೀತಿ ಚೆಕ್‌ ಮಾಡಿ

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.

ವಿದ್ಯಾರ್ಥಿಗಳು karresults.nic.in ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. ಸರ್ವರ್ ಸಮಸ್ಯೆ ಎದುರಾದಲ್ಲಿ ಡಿಜಿಲಾಕರ್ ಮೂಲಕವೂ ಫಲಿತಾಂಶ ವೀಕ್ಷಿಸಲು ಅವಕಾಶ ನೀಡಲಾಗಿದೆ.

2026ರ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಒಟ್ಟು 5,174 ಕಾಲೇಜುಗಳ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ವಿಜ್ಞಾನ ವಿಭಾಗದ 2.92 ಲಕ್ಷ, ವಾಣಿಜ್ಯ ವಿಭಾಗದ 2.11 ಲಕ್ಷ ಮತ್ತು ಕಲಾ ವಿಭಾಗದ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಕ್ಲಿಕ್ ಮಾಡಿದರೆ ಅಂಕಪಟ್ಟಿ ಪ್ರದರ್ಶಿಸಲಾಗುತ್ತದೆ.

ಇದಲ್ಲದೆ, ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಲಭ್ಯವಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿ ರವಾನೆಯಾಗುತ್ತದೆ. ಈ ಬಾರಿ ಮೊದಲ ಬಾರಿಗೆ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Share This Article