ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ: ರಾಹುಲ್ ಗಾಂಧಿ
ಬೆಂಗಳೂರು: ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಮಾತನಾಡಿದ ಅವರು, ವಿಳಾಸವಿಲ್ಲದ 40,000ಕ್ಕೂ ಹೆಚ್ಚು ಮತದಾರರನ್ನು ಪತ್ತೆಹಚ್ಚಿದ್ದೇವೆ.
ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ನನಗೆ ಪ್ರಮಾಣಪತ್ರ ನೀಡಲು ಹೇಳುತ್ತಿದೆ. ಸಂವಿಧಾನದ ಮೇಲೆ ಲೋಕಸಭೆಯೊಳಗೆ ಪ್ರಮಾಣ ಮಾಡಿದ್ದೇನೆ.
ಈ ಡೇಟಾ ಇಟ್ಕೊಂಡು ದೇಶದ ಪ್ರಜೆಗಳು ಪ್ರಶ್ನಿಸುತ್ತಾರೆಂದು ಆಯೋಗದ ವೆಬ್ಸೈಟ್ ಬಂದ್ ಮಾಡಿದೆ. ದೇಶದ ಚುನಾವಣಾ ಪಟ್ಟಿಯನ್ನು ಡಿಜಿಟಲ್ ರೂಪದಲ್ಲಿ ನೀಡಬೇಕು. ಮತಗಟ್ಟೆಗಳ ದೃಶ್ಯಾವಳಿ ನೀಡಿದರೆ ಮತಗಳ್ಳತನ ಸಾಬೀತು ಮಾಡುವೆ ಎಂದು ಅವರು ಹೇಳಿದ್ದಾರೆ.