No menu items!
6.3 C
Munich
Friday, May 1, 2026

ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸರ್ಕಾರ ಬೀಳುವ ಸಾಧ್ಯತೆ ಇದೆ ! ಯಾಕೆ ಗೊತ್ತಾ?

Must read

ಮಧ್ಯಪ್ರದೇಶದ ಕಾಂಗ್ರೆಸ್‍ನಲ್ಲೂ ಶಾಸಕರ ಅಸಮಾಧಾನ ಸ್ಫೋಟಗೊಂಡಿರುವುದರಿಂದ ಕಾಂಗ್ರೆಸ್ ವರಿಷ್ಠರು ಆತಂಕಗೊಂಡಿದ್ದಾರೆ. ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ ಪಿ-ಎಸ್ ಪಿ ಬೆಂಬಲದ ನಡುವೆ ಭಿನ್ನಮತ ಬಂದಿದೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ಅದಕ್ಕೆ ನಾವು ಹೊಣೆಗಾರರಲ್ಲ.ಅಂತಹ ಬೆಳವಣಿಗೆ ಕಂಡು ಬಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ನಮ್ಮನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ.

ಶಿವರಾಜಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ ಎಂದು ಆರೋಪಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article