ಕರ್ಬೂಜ ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!

Date:

ಕರ್ಬೂಜ ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!

ಬೇಸಿಗೆಯಲ್ಲಿ ಹೆಚ್ಚಿನ ಜನರು ಕರ್ಬೂಜದ ತಿನ್ನಲು ಇಷ್ಟಪಡುತ್ತಾರೆ. ಅನೇಕ ವಿಧದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕರ್ಬೂಜದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕರ್ಬೂಜದ ಹಣ್ಣನ್ನು ಸೇವಿಸುವುದರಿಂದ ಪೋಷಕಾಂಶಗಳ ಜೊತೆಗೆ ದೇಹಕ್ಕೆ ಜಲಸಂಚಯನವೂ ದೊರೆಯುತ್ತದೆ. ಕರ್ಬೂಜದ ಜೊತೆಗೆ, ಅದರಲ್ಲಿರುವ ಬೀಜಗಳು ಸಹ ಪೋಷಕಾಂಶಗಳಿಂದ ತುಂಬಿರುತ್ತವೆ.
ಆರೋಗ್ಯ ಪ್ರಯೋಜನಗಳು: ಮೂಳೆಗಳ ಆರೋಗ್ಯ ವೃದ್ಧಿಸಲು ಖನಿಜಾಂಶಗಳ ಪೂರೈಕೆ : ಕರ್ಬೂಜದ ಬೀಜಗಳಲ್ಲಿ ಕಂಡುಬರುವ ಮೆಗ್ನಿಷಿಯಂ, ಪೊಟ್ಯಾಷಿಯಂ ಹಾಗೂ ಸತುವಿನಂತಹ ಖನಿಜಗಳು ಆರೋಗ್ಯಕರ ಮೂಳೆಗಳು ಹಾಗೂ ಹಲ್ಲುಗಳನ್ನು ನೀಡುತ್ತವೆ. ಅಗಾಧ ಪ್ರಮಾಣದ ಪ್ರೊಟೀನ್ : ಕರ್ಬೂಜ ಹಣ್ಣಿನ ಬೀಜಗಳಲ್ಲಿ ಪ್ರೊಟೀನ್ ಅಗಾಧ ಪ್ರಮಾಣದಲ್ಲಿ ಇರುತ್ತದೆ. ಇವುಗಳು ಸ್ನಾಯುಗಳ ದುರಸ್ತಿ, ಬೆಳವಣಿಗೆ ಮಾತ್ರವಲ್ಲದೇ ಒಟ್ಟಾರೆ ದೇಹದ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಸಸ್ಯಾಹಾರಿಗಳು ತಮ್ಮ ಆಹಾರದಲ್ಲಿ ಪ್ರೊಟೀನ್ ಸೇವನೆ ಹೆಚ್ಚಿಸಿಕೊಳ್ಳಬೇಕು ಎಂದರೆ ಕರ್ಬೂಜದ ಬೀಜ ಉತ್ತಮ ಆಯ್ಕೆಯಾಗಿದೆ. ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ: ಕರ್ಬೂಜದ ಬೀಜಗಳಲ್ಲಿ ಇರುವ ಸಫೋನಿನ್ಗಳು ಹಾಗೂ ಫೈಟೊಸ್ಟೆರಾಲ್ಗಳು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತವೆ.ಸಫೋನಿನ್ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
ಹೃದಯದ ಆರೋಗ್ಯ : ಕರ್ಬೂಜದ ಬೀಜಗಳಲ್ಲಿ ಒಮೆಗಾ 3 ಹಾಗೂ ಒಮೆಗಾ 6 ಫ್ಯಾಟಿ ಆ್ಯಸಿಡ್ಗಳಿದ್ದು ಇವುಗಳು ಹೃದಯದ ಆರೋಗ್ಯವನ್ನು ಕಾಪಾಡುವ ಕೆಲಸ ಮಾಡುತ್ತವೆ. ಈ ಆರೋಗ್ಯಕರ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುವ ಮೂಲಕ ಹೃದ್ರೋಗದ ಅಪಾಯಗಳನ್ನು ಕಡಿಮೆ ಮಾಡುತ್ತದೆ. ವಯಸ್ಸಾಗುವಿಕೆಯನ್ನು ಕಡಿಮೆ ಮಾಡುತ್ತದೆ : ಕರ್ಬೂಜದ ಬೀಜಗಳಲ್ಲಿ ಇರುವ ಕೊಬ್ಬನಾಮ್ಲಗಳು ಚರ್ಮವನ್ನು ಪೋಷಿಸುವ ಕಾರ್ಯ ಮಾಡುತ್ತವೆ. ನೆರಳಾತೀತ ಕಿರಣಗಳಿಂದ ಮುಖಕ್ಕಾದ ಹಾನಿಯನ್ನು ಕಡಿಮೆ ಮಾಡುವ ಜೊತೆಯಲ್ಲಿ ವಯಸ್ಸಾಗುವಿಕೆಯನ್ನು ಮರೆಮಾಡುತ್ತದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...