ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!

Date:

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!

ಕಲಬುರ್ಗಿ:- ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ. ಇದೀಗ ದೂರು ಆಧರಿಸಿ FIR ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...