ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಬಿವೈ ವಿಜಯೇಂದ್ರ
ಬೆಂಗಳೂರು: ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ, ಕಲಬುರಗಿ ಜಿಲ್ಲೆ ಯಾರ ಕಪಿಮುಷ್ಠಿಯಲ್ಲಿದೆ ಎಂದು ಬಸ್ ನಿಲ್ದಾಣದಲ್ಲಿ ನಿಂತು ಕೇಳಿದರೂ ಹೇಳುತ್ತಾರೆ ಎಂದರು.
ಇನ್ನೂ ಕಾಂಗ್ರೆಸ್ನವರು ಬೆಳಗಿನ ಜಾವ 2-3 ಗಂಟೆಗೆ ಸಚಿನ್ ಕುಟುಂಬದವರನ್ನು ಭೇಟಿ ಮಾಡುತ್ತಾರೆ, ಕಾಂಗ್ರೆಸ್ನವರು ಹಗಲು ಕಾರ್ಯಾಚರಣೆ ಮಾಡುವುದಿಲ್ಲ. ಕುಟುಂಬಕ್ಕೆ ಸಮಾಧಾನ ಮಾಡಿ ಆಗದಿದ್ದರೆ ಬೆದರಿಕೆ ಹಾಕುತ್ತಾರೆ, ಇಡಿ ಕಲಬುರಗಿ ಜಿಲ್ಲೆಯ ಪೊಲೀಸ್ ಖರ್ಗೆ ಕುಟುಂಬದ ಹಿಡಿತದಲ್ಲಿದೆ ಎಂದರು.