ಕಲಬುರಗಿ: ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

Date:

ಕಲಬುರ್ಗಿ:- ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದು 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. KPME ಅನುಮತಿ ಪಡೆಯದೆ ರಾಜಾರೋಷವಾಗಿ ಜನರಿಗೆ ಚಿಕಿತ್ಸೆ ನೀಡಿ ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಟೀಂ ರಚಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಕಲಬುರಗಿ ಜಿಲ್ಲೆಯಲ್ಲಿ 109 ನಕಲಿ ವೈದ್ಯರು ಪತ್ತೆಯಾಗಿದ್ಧಾರೆ.
ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದು ಭರ್ಜರಿ ಭೇಟೆಯಾಡಿದ್ದಾರೆ. ಜಿಲ್ಲೆಯಲ್ಲಿ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್ಗಳನ್ನ ಬಂದ್ ಮಾಡಿಸಿದ್ದಾರೆ. KPME ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಕ್ಲಿನಿಕ್ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...

ತೆರೆಮೇಲೆ ಜೋಡಿ, ಬದುಕಲ್ಲೂ ಜೋಡಿ: ರಾಣವ್ ಗೌಡ-ರಾಧಾ ಭಗವತಿ ನಿಶ್ಚಿತಾರ್ಥ!

ತೆರೆಮೇಲೆ ಜೋಡಿ, ಬದುಕಲ್ಲೂ ಜೋಡಿ: ರಾಣವ್ ಗೌಡ-ರಾಧಾ ಭಗವತಿ ನಿಶ್ಚಿತಾರ್ಥ! ತೆರೆಮೇಲೆ ನಟಿಸುವಾಗ...

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ! ಮಂಡ್ಯ: ಮಾನಸಿಕ ಖಿನ್ನತೆಯಿಂದ...