ಕಲ್ಯಾಣ ಕರ್ನಾಟಕ ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ

Date:

ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.

2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು.

ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಉಳಿದಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ವೃಂದ ನೇಮಕಾತಿ, ಬ್ಯಾಕ್ಲಾಗ್ ಹುದ್ದೆಗಳು, ಹೊಸ ಹುದ್ದೆಗಳ ಸೃಜನೆ, ನೇರ ನೇಮಕಾತಿ ಮಾಡಿಕೊಳ್ಳಲು ತಡೆ ತೆರವುಗೊಳಿಸಿ ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ. ನೇರ ನೇಮಕಾತಿ ಅಡಿ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಹುದ್ದೆಗಳಿಗೆ ಆಯವ್ಯಯದಲ್ಲಿ ಸೂಕ್ತ ಅನುದಾನ ಕಲ್ಪಿಸಿಕೊಡುವ ಸಲುವಾಗಿ ನೇಮಕಾತಿ ಆದೇಶಕ್ಕೆ ಮೊದಲು ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಲಾಗಿದೆ.

ವಾಹನ ಚಾಲಕರು, ಗ್ರೂಪ್ ಡಿ ವೃಂದದ ಹುದ್ದೆಗಳು, ಬೆರಳಚ್ಚುಗಾರ, ಶಿಘ್ರಲಿಪಿಗಾರ ಹುದ್ದೆಗಳನ್ನು ಅನುದಾನದ ಲಭ್ಯತೆಯ ಒಳಪಟ್ಟು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ವೃಂದ ಬಲ ಶೇಕಡ 80 ಕ್ಕಿಂತ ಕಡಿಮೆ ಇರುವ ಸಂದರ್ಭದಲ್ಲಿ ಆಡಳಿತ ಇಲಾಖೆಗಳು ತಮ್ಮ ಹಂತದಲ್ಲಿಯೇ ನಿಯಮಾನುಸಾರ ನೇರ ನೇಮಕಾತಿ ಮಾಡಿಕೊಳ್ಳಲು ತಿಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...