ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!

Date:

ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಸಾಕಷ್ಟು ಜನರು ಅಳವಡಿಸಿಕೊಳ್ಳುತ್ತಿದ್ದು, ನೀರಿನಾಂಶ ಹೆಚ್ಚಾಗಿರುವ ಕಲ್ಲಂಗಡಿ ಹಣ್ಣನ್ನು ಹೆಚ್ಚಾಗಿ ಸೇವನೆ ಮಾಡುತ್ತಿದ್ದಾರೆ. ಹಣ್ಣಷ್ಟೇ ಅಲ್ಲ, ಅವುಗಳ ಸಿಪ್ಪೆ ಹಾಗೂ ಬೀಜಗಳನ್ನು ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿಕೊಂಡು ಸೇವನೆ ಮಾಡುತ್ತಿದ್ದಾರೆ. ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿ ವಿವಿಧ ಖನಿಜಗಳು ಮತ್ತು ಸತು, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಂತಹ ಪೋಷಕಾಂಶಗಳಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲೂ ಇದು ಕೊಡುಗೆ ನೀಡುತ್ತವೆ,
ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ
ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.
ಹೃದಯವನ್ನು ಆರೋಗ್ಯವಾಗಿಡುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು.
ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.
ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ
ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...