ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ: ಆರ್ ಅಶೋಕ್

Date:

ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ: ಆರ್ ಅಶೋಕ್

ಬೆಂಗಳುರು: ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ. ಹಿಂದೆ ನಮ್ಮ ವಿರುದ್ಧ 40 ಪರ್ಸೆಂಟ್ ಕಮಿಷನ್ ಎಂದು ಫೋಟೋ ಹಿಡಿಸಿದ್ದರು. ಅದೇ ಗುತ್ತಿಗೆದಾರರಿಂದ ಈಗ 40 ಪರ್ಸೆಂಟ್ಗಿಂತ ಹೆಚ್ಚು ಕಮಿಷನ್ ಪೀಕುತ್ತಿದ್ದಾರೆ ಎಂದರು.
ಇನ್ನೂ ಕಮಿಷನ್ ಪ್ರಮಾಣವನ್ನು ಶೇ 5 ರಷ್ಟು ಹೆಚ್ಚು ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ‌ ದಿನಗಳಲ್ಲಿ ಮತ್ತಷ್ಟು ಕಮಿಷನ್ ಹೆಚ್ಚಾಗಲಿದೆ. ಗುತ್ತಿಗೆದಾರರು ಆತ್ಮಹತ್ಯೆಗೆ ಅರ್ಜಿ ಹಾಕಿಕೊಳ್ಳುವ ಕಾಲ ಬಂದಿದೆ. ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ದಾಖಲೆ ಇದೆಯಾ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ಕೊಟ್ಟಿದ್ದಿರಾ? ಇದ್ಯಾವ ನ್ಯಾಯ? ಇದು 60 ಪರ್ಸೆಂಟ್ ಲೂಟಿಯ ಸರ್ಕಾರ ಎಂದು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...