ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಪಕ್ಷ ವಾಗ್ದಾಳಿ ನಡೆಸಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿ ಕಾರಿರುವ ಜೆಡಿಎಸ್; ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಕೊಳಕು ಮಂಡಲ ಕಾಂಗ್ರೆಸ್ ಪಕ್ಷಕ್ಕೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.
ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ಶಿಖಂಡಿ ಪಕ್ಷ ಎಂದು ಜೆಡಿಎಸ್ ತಿರುಗೇಟು
Date: