ಕಾಂಗ್ರೆಸ್ʼಗೆ ಭ್ರಷ್ಟಾಚಾರವೇ ಉಸಿರಾಗಿದೆ !

By
1 Min Read

ಕಲುಬುರಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್ʼಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದರು. ಚುನಾವಣೆಗೂ ಮೊದಲೇ ದೊಡ್ಡದೊಡ್ಡ ಭರವಸೆ ನೀಡಿದರು.
ಚುನಾವಣೆಗೂ ಮೊದಲು ಫ್ರೀ ಕರೆಂಟ್ ಎಂದು ಹೇಳಿದರು. ಈಗ ನೋಡಿದ್ರೆ ಕರೆಂಟ್ ಕೂಡ ಇಲ್ಲ ಏನೂ ಇಲ್ಲ. ಚುನಾವಣೆ ಬಳಿಕ ನಿಮ್ಮ ಜೇಬಿಗೆ ಕೈಹಾಕಿದರು ಎಂದು ಹೇಳುವ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಅಲ್ಲದೆ, ರೈತರಿಗೆ ಈ ಸರ್ಕಾರ ಮೋಸ ಮಾಡಿದೆ ಎಂದರು.
ನಾನು 2 ದಿನಗಳಲ್ಲಿ 4 ದಕ್ಷಿಣ ರಾಜ್ಯಗಳಿಗೆ ಭೇಟಿ ನೀಡಿದೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ಬಿಜೆಪಿ ಬಗ್ಗೆ ಉತ್ಸುಕತರಾಗಿದ್ದಾರೆ. ಜನರ ಉತ್ಸಾಹ ನೋಡಿ ನನಗೆ ಬಹಳ ಆನಂದವಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ ಎಂದು ಹೇಳುವ ಮೂಲಕ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ ಎಂದರು.

Share This Article