ಕಾಂಗ್ರೆಸ್ʼನ 44 ಮುಖಂಡರು, ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

Date:

ಬೆಂಗಳೂರು: ಕಾರ್ಯಕರ್ತರಿಗೆ ಕಾಂಗ್ರೆಸ್ ಸಿಹಿ ಸುದ್ದಿ ನೀಡಲಾಗಿದ್ದು, 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಪ್ರಹಸನಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ. ಶಾಸಕರಿಗೆ ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ನೇಮಕ ಮಾಡುವ ವಿಚಾರವಾಗಿ ಬಹಳಷ್ಟು ಸಮಸ್ಯೆಗಳನ್ನು ಕಾಂಗ್ರೆಸ್ ಸರ್ಕಾರ ಎದುರಿಸಿತ್ತು.
ಯಾರಿಗೆ ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ?
ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್ರಾಮ್ ಚರ್ಮ
ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಜನವರಿ 26ರಂದು ರಾಜ್ಯ ಸರ್ಕಾರ ನೇಮಕ ಮಾಡಿತ್ತು. ಒಂದು ಹಂತದಲ್ಲಿ ನಿಗಮ ಮಂಡಳಿ ನೇಮಕ ವಿಚಾರವಾಗಿ ಹೈಕಮಾಂಡ್ ಜತೆಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂಘರ್ಷಕ್ಕೆ ಇಳಿದಿದ್ದರು. ಅಂತಿಮವಾಗಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಂಡು ನೇಮಕ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿತ್ತು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...