ಕರ್ನಾಟಕದಲ್ಲಿ ಉಪ ಚುನಾವಣೆಯ ಕಾವು ಹೆಚ್ಚಾಗಿದೆ ಪ್ರಚಾರದ ಅಖಾಡಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಇಳಿದಿದ್ದಾರೆ ಇದರ ಮಧ್ಯೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇಂದು ದಿಢೀರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಕೂಡ ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಬ್ರೇಕ್ ಫಾಸ್ಟ್ ನೆಪದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪ್ರಕಾಶ್ ಹುಕ್ಕೇರಿ ಟಿಕೆಟ್ ಕೈ ತಪ್ಪಿದ್ದರಿಂದ ಪ್ರಚಾರದಿಂದ ದೂರವೇ ಉಳಿದಿದ್ದಾರೆ. ಅವರು ಇಂದು ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.