ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜಕಾರಣದ ಹಲವಾರು ವಿಷಯಗಳು ಗಂಭೀರ ಚರ್ಚೆಗಳಾಗಿವೆ.ನೆರೆ, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಅನುದಾನ ನೀಡುವಲ್ಲಿ ಕೇಂದ್ರದ ತಾರತಮ್ಯ, ದ್ವೇಷದ ರಾಜಕಾರಣ, ಕಾಂಗ್ರೆಸ್ಸಿಗರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು, ಡಿ.ಕೆ.ಶಿವಕುಮಾರ್ ಅವರ ಬಂಧನ, ಅನುದಾನ ಹಂಚಿಕೆಯಲ್ಲಿನ ತಾರತಮ್ಯ, ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಹಲವಾರು ವಿಷಯಗಳು ಸಭೆಯಲ್ಲಿ ಚರ್ಚೆಯಾಗಿವೆ.
ಸುಮಾರು 7 ತಾಲೂಕುಗಳು ಬರ ಪೀಡಿತವಾಗಿವೆ. ಕೇಂದ್ರ ಸರ್ಕಾರ ಈವರೆಗೂ ನೆರೆ ನಿರ್ವಹಣೆಗೆ ಒಂದು ರೂ. ಅನುದಾನ ಕೊಟ್ಟಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿಯವರ ಬಳಿ ಅನುದಾನ ಕೇಳುವ ಧೈರ್ಯ ಇಲ್ಲ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರದಿಂದಾಗುತ್ತಿಲ್ಲ ಎಂದು ಸಭೆಯಲ್ಲಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.