ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸೋನಿಯಾಗಾಂಧಿ ಅವರನ್ನು ಆಯ್ಕೆ ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸೋನಿಯಾಗಾಂಧಿ ಅವರನ್ನು ಆಯ್ಕೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.
ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲಾಗುವುದು ಎಂದು ತಿಳಿಸಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆ ನೆಡೆದಿತ್ತು ಅದರಲ್ಲಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎ.ಕೆ. ಆಂಟನಿ, ಅಹ್ಮದ್ ಪಟೇಲ್, ಗುಲಾಮ್ ನಬಿ ಆಜಾದ್, ಕೆ.ಸಿ. ವೇಣುಗೋಪಾಲ್ ಮೊದಲಾದವರು ಭಾಗಿಯಾಗಿದ್ದು, ಸೋನಿಯಾಗಾಂಧಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.