ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ: ಬಿವೈ ವಿಜಯೇಂದ್ರ
ನವದೆಹಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ, ಅಬಕಾರಿ ಹಗರಣ ಬೆಳಕಿಗೆ ಬಂದಿದೆ. ಲೋಕಾಯುಕ್ತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ.
ಭೈರತಿ ಸುರೇಶ್ ಹೆಲಿಕಾಪ್ಟರ್ನಲ್ಲಿ ದಾಖಲೆ ಹೊತ್ತೊಯ್ದಿದ್ದಾರೆ. ದಾಖಲೆಗಳನ್ನು ಅಧಿಕಾರಿಗಳ ಮೂಲಕ ನಾಶಪಡಿಸಲಾಗಿದೆ. ದಾಖಲೆ ನಾಶ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಿದ್ದರು. ಲೋಕಾಯುಕ್ತರನ್ನು ಸಿಎಂ ಬಾಮೈದ ರಾತ್ರಿ ಭೇಟಿ ಮಾಡಿದ್ದಾರೆ. ಸಿಎಂ ಕ್ಲೀನ್ಚಿಟ್ ತೆಗೆದುಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ. ಶೀಘ್ರದಲ್ಲೇ ಕ್ಲೀನ್ ಚೀಟ್ ಸಿಗಲಿದೆ ಯಾವ ಅನುಮಾನ ಬೇಡ ಎಂದು ವಿಜಯೇಂದ್ರ ಟೀಕಿಸಿದ್ದಾರೆ..