ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್ ದಾಖಲಾಗಿದೆ. ಹೌದು ದೈವಕೋಲದ ವೇಳೆ ಸಭೆ ನಡೆಸಿದ ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದ ಜಯಪ್ರಕಾಶ್ ಹೆಗ್ಡೆ, ಸಾರ್ವಜನಿಕರೊಂದಿಗೆ ಚುನಾವಣಾ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಫ್ಲೈಯಿಂಗ್ ಸ್ಕಾಡ್‍ಗೆ ಮಾಹಿತಿ ಬಂದಿತ್ತು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್
Date: