ರಾಜ್ಯ ರಾಜಕಾರಣ ವಲಯದಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದೆ ಇದರ ಮಧ್ಯೆ ಒಬ್ಬರ ಮೇಲೊಬ್ಬರು ಮಾತಿನ ಚಕಮಕಿ ಕೂಡ ನಡೆಯುತ್ತಿದೆ ನಾರಾಯಣ ಗೌಡ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರು ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಏಕಾಂಗಿಯಾಗಿದ್ದಾರೆ. ಸಿದ್ದರಾಮಯ್ಯನ ವಿರುದ್ಧ ಕಾಂಗ್ರೆಸ್ ಸಮರ ಸಾರುತ್ತಿದೆ. ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಗೆಲ್ಲುವುದಿಲ್ಲ ಎಂದು ಅವರು ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಾರಥ್ಯದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಬಹುಮತದಲ್ಲಿ ಹದಿನೈದು ಕ್ಷೇತ್ರದಲ್ಲಿ ಗೆದ್ದು ಬರುತ್ತೆ ಈಗಾಗಲೇ ಮೈತ್ರಿ ಸರ್ಕಾರ ಒಡೆದಿದೆ ಸಿದ್ದರಾಮಯ್ಯ ಮೂಲೆ ಗುಂಪಾಗಿದ್ದಾರೆ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ ಎಂದು ಡಿಸಿಎಂ ಅಶ್ವತ್ನಾರಾಯಣ ನೀಡಿದ್ದಾರೆ .