ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು,ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಇದೀಗ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ನಾಲ್ಕು ಕ್ಷೇತ್ರಗಳು ಮಾತ್ರ ಬಾಕಿ ಉಳಿದುಕೊಂಡಿವೆ.
ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
• ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
• ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
• ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
• ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
• ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
• ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
• ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
• ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
• ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
• ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
• ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
• ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
• ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
• ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
• ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
• ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
• ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ