ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

tnit editors
1 Min Read

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬೆಳಗಾವಿ ಹೊರವಲಯದಲ್ಲಿ ನಿನ್ನೆ ರಾತ್ರಿ ಶಾಸಕರ ಜತೆ ಔತಣಕೂಟ ಮಾಡಿದ್ದೀರಂತಲ್ಲಾ ಎಂಬ ಪ್ರಶ್ನೆಗೆ,
“ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ” ಎಂದರು.
“ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ” ಎಂದು ಹೇಳಿದರು.

Share This Article