ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗುತ್ತಿದ್ದಂತೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷದ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿ ಹೈದರಾಬಾದಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಹೆಚ್.ಡಿ. ರೇವಣ್ಣ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಶಾಸಕ ಭೀಮಾನಾಯ್ಕ ಅವರಿಗೆ ಬಿಟ್ಟುಕೊಡಲು ಮುಂದಾಗಿದ್ದರು. ಕಾಂಗ್ರೆಸ್ ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಸಿಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳಿದ್ದು, ಇದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ರೇವಣ್ಣ ಒಪ್ಪಿದ್ದರೆನ್ನಲಾಗಿದೆ. ಆದರೆ ಮಂತ್ರಿಸ್ಥಾನ ಕಳೆದುಕೊಳ್ಳುತ್ತಿದ್ದಂತೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ರೇವಣ್ಣ ಕಾಂಗ್ರೆಸ್ ಪಕ್ಷದ ನಾಲ್ವರು ನಿರ್ದೇಶಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ.